ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್ -ಕಹಳೆ ನ್ಯೂಸ್
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಥಾಯ್ಲೆಂಡ್ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ...







