Sunday, June 14, 2026

ಸುದ್ದಿ

ಸುದ್ದಿ

ಬೆಂಗಳೂರಿನ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ : ತಪ್ಪಿದ ಅನಾಹುತ- ಕಹಳೆ ನ್ಯೂಸ್

ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ  ತರಗತಿ ನಡೆಯುತ್ತಿದ್ದ ವೇಳೆಯೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ  ಸಂಭವಿಸಿದೆ. ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಶಿಕ್ಷಕರು ಎಲ್ಲಾ ಮಕ್ಕಳನ್ನು ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು  ದೌಡಾಯಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಸಂಭವಿಸಿದ್ದು...
ಸುದ್ದಿ

ಭಾರತ – ಯುಎಸ್‌ ವ್ಯಾಪಾರ ಒಪ್ಪಂದ 99% ಪೂರ್ಣ – ಶೀಘ್ರದಲ್ಲೇ ಫೈನಲ್‌ ಡೀಲ್‌ ನಿರೀಕ್ಷೆ- ಕಹಳೆ ನ್ಯೂಸ್

ನವದೆಹಲಿ/ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು 99% ಪೂರ್ಣಗೊಂಡಿದೆ. ಶೀಘ್ರದಲ್ಲೇ ಅಂತಿಮ ಒಪ್ಪಂದ ಏರ್ಪಡುವ ನಿರೀಕ್ಷೆಯಿದೆ ಎಂದು ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ದೆಹಲಿಯಲ್ಲಿ ʻಯುಎಸ್ ಇಂಡಿಯಾ ಟ್ರಸ್ಟ್ ಇನಿಶಿಯೇಟಿವ್: ಅಡ್ವಾನ್ಸಿಂಗ್ ಪಾರ್ಟ್‌ನರ್‌ಶಿಪ್ ಇನ್ ರಿಸರ್ಚ್ ಅಂಡ್ ಇನ್ನೋವೇಶನ್ʼ ವಿಷಯ ಕುರಿತು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ – ಅಮೆರಿಕ ನಡುವೆ 99% ಮಾತುಕತೆಗಳು ಪೂರ್ಣಗೊಂಡಿದ್ದು, 1%...
ಸುದ್ದಿ

ಅನುಚಿತ ವರ್ತನೆ ತೋರಿದ ಪುಂಡ ಯುವಕನಿಗೆ ಮಹಿಳೆಯಿಂದ ಚಪ್ಪಲಿ ಏಟು- ಕಹಳೆ ನ್ಯೂಸ್

ರಾಯಚೂರು: ಅನುಚಿತ ವರ್ತನೆ ತೋರಿದ ಯುವಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಜೊತೆಗೆ ಅಶ್ಲೀಲವಾಗಿ ಮಾತಾಡಿದ್ದಾನೆ. ಇದರಿಂದ ಸಹನೆ ಕಳೆದುಕೊಂಡು ಮಹಿಳೆ ಯುವಕನ ವರ್ತನೆ ಸಹಿಸಲಾಗದೇ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಸ್ಥಳದಲ್ಲಿದ್ದ ಪ್ರಯಾಣಿಕರು ಸಹ ಧರ್ಮದೇಟು ನೀಡಿದ್ದು, ಯುವಕ ಬಸ್ ನಿಲ್ದಾಣದಿಂದ...
ಸುದ್ದಿ

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” : ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “ *_The New Diamond Destination_* ” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಖರೀದಿ ಅನುಭವವನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ....
ಮುಂಬೈರಾಜ್ಯಸುದ್ದಿ

2ನೇ ಬಾರಿಗೆ ದರ ಏರಿಕೆ ಬಿಸಿ : ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ – ಕಹಳೆ ನ್ಯೂಸ್

ಮುಂಬೈ: ಪೆಟ್ರೋಲ್‌, ಡೀಸೆಲ್‌  ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (SCM)...
ಜಿಲ್ಲೆಸುದ್ದಿ

ಸಿದ್ದರಾಮಯ್ಯ ರಾಜೀನಾಮೆಗೆ ಎಂ.ಸಿ ಸುಧಾಕರ್ ಕಣ್ಣೀರು -ಕಹಳೆ ನ್ಯೂಸ್

ದಾವಣಗೆರೆ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ನೆನೆದು ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ ಸುಧಾಕರ್  ಭಾವುಕರಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddarmaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ನೆನೆದು ಭಾವುಕರಾದರು. ಸಿದ್ದರಾಮಯ್ಯನವರನ್ನು ಕಳೆದ ಎರಡು, ಮೂರು ದಿನಗಳಿಂದ ನೋಡಲಾಗುತ್ತಿಲ್ಲ. ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ ಎಂದರೆ ಅದು ಸಿದ್ದರಾಮಯ್ಯನವರು....
ಸುದ್ದಿ

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 50 ಸಾವಿರ ಜನ! -ಕಹಳೆ ನ್ಯೂಸ್

ರಾಮನಗರ: ಡಿ.ಕೆ. ಶಿವಕುಮಾರ್  ಅವರ ಪ್ರಮಾಣವಚನ ಸಮಾರಂಭಕ್ಕೆ ಅವರ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಹೈಕಮಾಂಡ್ ಮಟ್ಟದಲ್ಲಿ ಪ್ರಕ್ರಿಯೆಗಳು ಚುರುಕಾಗಿರುವ ಬೆನ್ನಲ್ಲೇ, ಪದಗ್ರಹಣ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆಯಿಂದಲೇ ಬರೋಬ್ಬರಿ 40 ರಿಂದ 50 ಸಾವಿರ ಜನರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಸಂಬಂಧ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್(Iqbal Hussain) ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು...
1 18 19 20 21 22 3,391
Page 20 of 3391