Sunday, June 14, 2026

ಸುದ್ದಿ

ಜಿಲ್ಲೆಸುದ್ದಿ

ಬಳ್ಳಾರಿ ಪೊಲೀಸರ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ -ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.52 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿಯನ್ನು  ಬಳ್ಳಾರಿಯ  ಕುರಗೋಡು ಪೊಲೀಸರು  ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಬಳಿ ಲಾರಿ ಸಮೇತ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಖದೀಮರು ಲಾರಿ ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದಾಗ, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಬಾದಹಟ್ಟಿ ಗ್ರಾಮದ ಬಳಿಯ ಲೇಔಟ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ...
ಜಿಲ್ಲೆರಾಜ್ಯಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ : ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ -ಕಹಳೆ ನ್ಯೂಸ್

ಯಾದಗಿರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ   ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಯಾದಗಿರಿಯ ಸುಭಾಷ್ ವೃತ್ತದಲ್ಲಿ ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ನನ್ನ ಸಾವಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರಣರಾಗುತ್ತಾರೆಂದು ಹೇಳಿ,...
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು -ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌  ಕಣ್ಣೀರಿಟ್ಟಿದ್ದಾರೆ. ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ ಮಾಡಿದರು. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಿಸಿ, ಅವರಿಗೆ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು. ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳಿ ಸಭೆಯಲ್ಲೇ ಆಪ್ತ ಸಚಿವರು ಕಣ್ಣೀರಿಟ್ಟರು. ಸಭೆ ಬಳಿಕ ಒಬ್ಬೊಬ್ಬರಾಗಿ ಹೊರಬಂದ ಸಚಿವರ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಮೇ 31 ರಂದು ಲೋಕಾರ್ಪಣೆ -ಕಹಳೆ ನ್ಯೂಸ್

ಬೆಳ್ತಂಗಡಿ: ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ಸಿರಿ'' ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತಮಾತೃಶ್ರೀ ಇಂಡಸ್ಟಿçಯಲ್ ಪಾರ್ಕ್”ನ ಉದ್ಘಾಟನಾ ಸಮಾರಂಭವು ಮೇ 31 ರಂದು ಪೂರ್ವಾಹ್ನ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಿರಿ'' ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ತಿಳಿಸಿದ್ದಾರೆ. ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್” ಉದ್ಘಾಟಿಸುವರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿ ಸಭೆ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ –ಕಹಳೆ ನ್ಯೂಸ್

ಕಲ್ಲಡ್ಕ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ನೆಟ್ಲಮುಡ್ನೂರು ಗ್ರಾಮದ ಬಿಲ್ಲವ ಗ್ರಾಮ ಸಮಿತಿಯ ಕಾರ್ಯಕಾರಿ ಸಭೆಯು ಸೋಮಪ್ಪ ಪೂಜಾರಿ ಮಾದೇಲು ಇವರ ಮನೆಯಲ್ಲಿ ಮೇ 27ನೇ ಬುಧವಾರ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಶ್ರೀಧರ್ ಪೂಜಾರಿ ಮುಜಲ ವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ರಮೇಶ್ ಪೂಜಾರಿ ಮೆಸ್ಕಾಂ ಹಾಗೂ ಡಾ. ತ್ರಿವೇಣಿ ರಮೇಶ್ ದಂಪತಿಗಳ ಸುಪುತ್ರಿ ಪ್ರಗತಿ ಆರ್ ಸಾಲ್ಯಾನ್, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು –ಕಹಳೆ ನ್ಯೂಸ್

ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಈ ಹಿಂದೆ ಜನವರಿಯಲ್ಲಿ ನೇತ್ರಾವತಿ ಶಿಖರ, ಬಂಡಾಜೆ ಜಲಪಾತ ಮತ್ತು ಗಡಾಯಿಕಲ್ಲು ಮುಂತಾದ ಜನಪ್ರಿಯ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧ ಹೇರಲಾಗಿತ್ತು. ಬೇಸಿಗೆಯ ತಿಂಗಳುಗಳಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮತ್ತು ಹುಲಿ ಗಣತಿಗೆ ಅನುಕೂಲವಾಗುವಂತೆ ಈ ನಿರ್ಬಂಧವನ್ನು ಪ್ರಾಥಮಿಕವಾಗಿ ಜಾರಿಗೆ ತರಲಾಯಿತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ -ಕಹಳೆ ನ್ಯೂಸ್

ಮಂಗಳೂರು : ಇತ್ತೀಚೆಗೆ ನಗರದ ಕೋಡಿಕಲ್ ಬಳಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸಚಿನ್ ಕೆ ಆರ್ (24 ವ) ಮತ್ತು ನೆಲ್ಯಾಡಿಯ ಚಂದನ್ (24 ವ) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಮೇ 24 ರಂದು ಮಧ್ಯರಾತ್ರಿ 02:10 ಗಂಟೆಯ ವೇಳೆಗೆ ಉರ್ವ ಪೊಲೀಸ್...
1 20 21 22 23 24 3,391
Page 22 of 3391