ಪಿಎಫ್ಐ ಮೇಲೆ ನಿಷೇಧ ಸಾಧ್ಯತೆ | ಮಹತ್ವದ ನಿರ್ಧಾರಕ್ಕೆ ಮುಂದಾದ ಸರಕಾರ.
ನವದೆಹಲಿ: ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರಣಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ನಿಷೇಧ ಹೇರುವ ಸಾಧ್ಯತೆಯಿದೆ. ಉಗ್ರರ ಕ್ಯಾಂಪ್‌ಗ್ಳು ಮತ್ತು ಬಾಂಬ್ ತಯಾರಿಕೆ ಸೇರಿದಂತೆ ಭಯೋತ್ಪಾದಕ ಕೃತ್ಯಗಳಲ್ಲಿ ಸಂಘಟನೆ ತೊಡಗಿಸಿಕೊಂಡಿದ್ದು, ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ನಿಷೇಧ ಹೇರಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ವರದಿ ನೀಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆದರೆ ಎನ್‌ಐಎ ವರದಿಯಲ್ಲಿನ ಆರೋಪಗಳನ್ನು ಪಿಎಫ್ಐ ತಳ್ಳಿಹಾಕಿದೆ....







