ಎರಡು ಸಾವಿರ ಸಂತರು, ಲಕ್ಷ ಜನ | ರಾಮಮಂದಿರ ನಿರ್ಮಾಣ, ಗೋಸಂರಕ್ಷಣೆ ಕುರಿತು ಚರ್ಚೆ ನಡೆಯಲಿದೆ – ಗೋಪಾಲ್ ಜೀ.
ಉಡುಪಿ : ನ.24,25,26ರಂದು ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸದ್ ಅಧಿವೇಶನದಲ್ಲಿ ರವಿಶಂಕರ್ ಗುರೂಜಿ, ಬಾಬಾ ರಾಮ್ ದೇವ್, ಯೋಗಿ ಆದಿತ್ಯನಾಥ್, ರಾಘವೇಶ್ವರ ಶ್ರೀ ಸೇರಿ ದೇಶದ 2 ಸಾವಿರಕ್ಕೂ ಹೆಚ್ಚು ಸಾಧು ಸಂತರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. ಅಧಿವೇಶನದಲ್ಲಿ ಮುಖ್ಯ ವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ವಣದ ಚರ್ಚೆಯಾಗಲಿದೆ. ಅಸ್ಪೃಶ್ಯತೆ, ಗೋರಕ್ಷಣೆ, ಮತಾಂತರ ವಿಚಾರಗಳ ಬಗ್ಗೆ ವಿಚಾರ...







