ಪುಲ್ವಾಮಾ ದಾಳಿಗೆ 7 ವರ್ಷ : ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ- ಕಹಳೆ ನ್ಯೂಸ್
ನವದೆಹಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ , ಹುತಾತ್ಮ ಯೋಧರನ್ನು ವೀರ ಸೇನಾನಿಗಳು ಎಂದು ಶ್ಲಾಘಿಸಿದ್ದಾರೆ. 2019ರ ಈ ದಿನ ಪುಲ್ವಾಮಾ ದಾಳಿಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರ ಸೇನಾನಿಗಳನ್ನು ಸ್ಮರಿಸುತ್ತಿದ್ದೇವೆ. ಅವರ ದೇಶಭಕ್ತಿ ಮತ್ತು ಸೇವೆ ಸದಾ ನಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ಅವರ ಧೈರ್ಯವು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ನೀಡುತ್ತದೆ ಎಂದು...







