ಹುಬ್ಬಳ್ಳಿಯಲ್ಲಿ ಕಡಲೆ ಖರೀದಿ ಕೇಂದ್ರ ಸ್ಥಾಪನೆಗಾಗಿ ಆಗ್ರಹಿಸಿ ಜೆಡಿಎಸ್ ಯುವ ಘಟಕದಿಂದ ಪ್ರತಿಭಟನೆ
ಹುಬ್ಬಳ್ಳಿ(ಧಾರವಾಡ) : ಉತ್ತರ ಕರ್ನಾಟಕ ಭಾಗದ ರೈತರ ಭರವಸೆಯ ಬೆಳೆಯಾದ ಕಡಲೆಗೆ ಬೆಂಬಲ ಬೆಲೆ ನಿಗದಿ ಮಾಡಿ, ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜೆಡಿಎಸ್ ತಾಲೂಕು ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಈ ಭಾಗದ ರೈತರು ಕಡಲೆ ಬೆಳೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇಳುವರಿ ಕಂಡಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಈಗಾಗಲೇ ಗಣನೀಯ ಪ್ರಮಾಣದಲ್ಲಿ ಬೆಲೆ ಕುಸಿದಿದೆ. ರಾಜ್ಯ ಸರ್ಕಾರ ಕೂಡಲೇ ಹುಬ್ಬಳ್ಳಿ ಹಾಗೂ ನವಲಗುಂದ ಸೇರಿದಂತೆ ಇತರೆ ಭಾಗಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು...






