Sunday, June 14, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ: ಪಾಳುಬಿದ್ದ ಮನೆಯಲ್ಲಿ ಅನಾಥ ಶವ ಪತ್ತೆ – ಕಹಳೆ ನ್ಯೂಸ್

ಮೂಡುಬಿದಿರೆ: ಇಲ್ಲಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವು ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಈ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದ್ದು, ಶವದಿಂದ ತೀವ್ರ ದುರ್ನಾಥ ಬರುತ್ತಿತ್ತು. ನೆರೆಮನೆಯವರ ನಾಯಿಯೊಂದು ಕಾಣೆಯಾಗಿದ್ದರಿಂದ, ಅದು ಎಲ್ಲಾದರೂ ಸತ್ತು ಬಿದ್ದಿರಬಹುದೇ ಎಂದು ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದಾಗ ಈ ಪಾಳುಬಿದ್ದ...
ಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

ಭಾರೀ ಮಳೆಗೆ ಅವಾಂತರ : ಮೈಸೂರು-ಶಿವಮೊಗ್ಗ, ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರದಲ್ಲಿ ವ್ಯತ್ಯಯ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾನುವಾರ ಸುರಿದ ಗುಡುಗು ಸಿಡಿಲು ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಮೈಸೂರು – ಶಿವಮೊಗ್ಗ  ಹಾಗೂ ಶಿವಮೊಗ್ಗ – ತಾಳಗುಪ್ಪ ಪ್ಯಾಸೆಂಜರ್ ಟ್ರೈನ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ಕಾದು-ಕಾದು ಹೈರಾಣಾಗಿದ್ದಾರೆ. ಮಳೆಗಾಳಿಗೆ ರೈಲ್ವೆ ಟ್ರ್ಯಾಕ್‌  ಮೇಲೆ ಬೃಹತ್ ಮರ ಬಿದ್ದಿದ್ದು, ವಿದ್ಯುತ್ ಲೇನ್ ತುಂಡಾಗಿದೆ. ಇದರಿಂದಾಗಿ ಶಿವಮೊಗ್ಗ- ಚಿಕ್ಕಮಗಳೂರು ಪ್ಯಾಸೆಂಜರ್ ರೈಲು, ಬೆಂಗಳೂರು- ಶಿವಮೊಗ್ಗ- ಜನಶತಾಬ್ಧಿ ರೈಲು ಸಂಚಾರಕ್ಕೂ ಅಡಚಣೆಯಾಗಿದೆ. ಮರ ತೆರವುಗೊಳಿಸಿ,...
ಸುದ್ದಿ

ಬಿಹಾರದಲ್ಲಿ ಧಗಧಗಿಸಿದ ಪ್ಯಾಸೆಂಜರ್‌ ರೈಲು : ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಶಂಕೆ – ಕಹಳೆ ನ್ಯೂಸ್

ಪಾಟ್ನಾ: ಬಿಹಾರದ  ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲೊಂದು ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಈ ರೈಲು ಪಾಟ್ನಾಗೆ ತೆರಳಲು ಸಜ್ಜಾಗಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ...
ಕೇರಳಸುದ್ದಿ

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್‌ – ಕಹಳೆ ನ್ಯೂಸ್

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್  ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು....
ಸುದ್ದಿ

ಶಾಲೆಯಲ್ಲಿ ಹಾಜರಾತಿ ವೇಳೆ ‘Yes Sir’ ಬದಲು ಜೈ ಶ್ರೀರಾಮ್ ಅಂತ ಹೇಳಿ: ವಿದ್ಯಾರ್ಥಿಗಳಿಗೆ ಯತ್ನಾಳ್ ಕರೆ -ಕಹಳೆ ನ್ಯೂಸ್

ವಿಜಯಪುರ: ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ. ಇನ್ಮುಂದೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ ‘ಎಸ್ ಸರ್’ ಎನ್ನುವ ಬದಲು ಜೈ ಶ್ರೀರಾಮ್ ಅಂತ ಹೇಳಿ. ಶಿಕ್ಷಕರಿಗೆ ನಮಸ್ಕರಿಸುವಾಗ ಜೈ ಶ್ರೀರಾಮ್ ಎನ್ನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಕರೆ ಕೊಟ್ಟಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಪುನಃ ಹಿಜಬ್ ಧರಿಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಅವರು ಹರಿಹಾಯ್ದಿದ್ದಾರೆ. ಕೇಸರಿ ಶಾಲು ಧರಿಸುವುದಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳಾಲು : ಮೇ 16 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ರಾತ್ರಿ ಪ್ರಸನ್ನ ರಂಗ ಪೂಜೆ ಮತ್ತು ಶ್ರೀದೇವರ ಉತ್ಸವ ಬಲಿ ನಡೆಯಿತು. ವಾರ್ಷಿಕ ಮಹಾಸಭೆ...
ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ LPG ಟ್ಯಾಂಕರ್‌ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತದತ್ತ ಎಲ್‌ಪಿಜಿ (LPG) ಮತ್ತು ಕಚ್ಚಾ ತೈಲ ಪೂರೈಕೆ ಮುಂದುವರಿದಿದೆ. ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ  ಎಲ್‌ಪಿಜಿ ಟ್ಯಾಂಕರ್ ಸುರಕ್ಷಿತವಾಗಿ ಗುಜರಾತ್‌ನ ಕಾಂಡ್ಲಾದ ದೀನ್‌ದಯಾಳ್ ಬಂದರನ್ನು ತಲುಪಿದೆ. ಇದು ಭಾರತದ ಇಂಧನ ಪೂರೈಕೆಗೆ ಮಹತ್ವದ ಬೆಳವಣಿಗೆಯಾಗಿದೆ. ಸುಮಾರು 20,000 ಟನ್ ದ್ರವ ಪ್ರೊಪೇನ್ ಮತ್ತು ಬ್ಯುಟೇನ್ ಸಾಗಿಸುತ್ತಿದ್ದ ಈ ಟ್ಯಾಂಕರ್ ಮೇ 13 ರಂದು ಹಾರ್ಮುಜ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ : ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ...
1 36 37 38 39 40 3,392
Page 38 of 3392