Monday, June 15, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ ಹಾಗೂ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕು ಪ್ರಾಥಮಿಕ ಅರೋಗ್ಯ ಕೇಂದ್ರ ಮಾಣಿ ಇಲ್ಲಿ ಬಂಟ್ವಾಳ ತಾಲೂಕಿನ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ, ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ವಿವಿಧ ದಾನಿಗಳ ಸಹಕಾರದಿಂದ ಆಸ್ಪತ್ರೆಯ ಆವಾರಣಕ್ಕೆ ಅಲವಡಿಸಿದ ಇಂಟೆರ್ ಲಾಕ್ ಉದ್ಘಾಟನೆ ಹಾಗೂ ಅರೋಗ್ಯಕೇಂದ್ರದ ಮೂಲಭೂತ ಸೌಕರ್ಯಕ್ಕೆ ಸಹಕರಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಮೇ 13 ಬುಧವಾರ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಉಳ್ಳಾಲ್ತಿ...
ಜಿಲ್ಲೆಸುದ್ದಿ

ಮಾದಪ್ಪನ ಭಕ್ತರಿಗೆ ಶಿವರಾತ್ರಿ, ಯುಗಾದಿ ವೇಳೆಯಷ್ಟೇ ಕಾಲ್ನಡಿಗೆ ಬರಲು ಅವಕಾಶ: ಸಚಿವ ಖಂಡ್ರೆ -ಕಹಳೆ ನ್ಯೂಸ್

ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ  ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ಮುಂದೆ ಮಾದಪ್ಪನ ಬೆಟ್ಟಕ್ಕೆ ವರ್ಷವಿಡೀ ಪಾದಯಾತ್ರೆಗೆ ನಿಷೇಧ ಹೇರಲಾಗಿದೆ. ಮಹದೇಶ್ವರ ಬೆಟ್ಟಕ್ಕೆ ಯುಗಾದಿ ಮತ್ತು ಶಿವರಾತ್ರಿ ವೇಳೆ ಮಾತ್ರ ಪಾದಯಾತ್ರೆಗೆ ಅವಕಾಶ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ  ಸೂಚನೆ ಕೊಟ್ಟಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ ಹಿನ್ನೆಲೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ ಹಾಗೂ ಮಾಸಿಕ ಸಭೆ -ಕಹಳೆ ನ್ಯೂಸ್

ಕಾಡಬೆಟ್ಟು : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡುಬೆಟ್ಟು, ವಗ್ಗ ವತಿಯಿಂದ ಮಾಡಲಾಯಿತು. ಇದು ಈ ವರ್ಷದಲ್ಲಿ ಕಾಡಬೆಟ್ಟು ವಗ್ಗ ಶೌರ್ಯ ಘಟಕದ 6ನೇ ಮನೆ ದುರಸ್ತಿಯ ಶ್ರಮದಾನವಾಗಿದ್ದು, ಕಮಲ ಪೂಜಾರ್ತಿಯವರು ತೀರಾ ಬಡತನದಿಂದ ಮನೆಯಲ್ಲಿ ಒಬ್ಬರೇ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ. -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ,...
ಸಂತಾಪಸುದ್ದಿ

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಹೋದರ ಪ್ರತೀಕ್‌ ಯಾದವ್‌ ನಿಧನ -ಕಹಳೆ ನ್ಯೂಸ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್  ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಹೋದರ ಪ್ರತೀಕ್ ಯಾದವ್ (38 ವರ್ಷ) ಅವರು ಲಕ್ನೋದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಬೆಳಿಗ್ಗೆ ಸುಮಾರು 6 ಗಂಟೆಗೆ ಪ್ರತೀಕ್ ಯಾದವ್ಅ ವರನ್ನು ಲಕ್ನೋದ ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತಪಟ್ಟಿದ್ದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.  ಇವರು...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

‘ಮಿಲನ, ಹಿಟ್ಲರ್ ಕಲ್ಯಾಣ’ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ, -ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ನಟ, ನಿರ್ಮಾಪಕ ದಿಲೀಪ್ ರಾಜ್  ಅವರು ಹೃದಯಾಘಾತದಿಂದ ಇಂದು ನಿಧನರಾದರು. 47 ವಯಸ್ಸಿನ ದಿಲೀಪ್ ರಾಜ್ ಅವರಿಗೆ ಇಂದು ಬುಧವಾರ (ಮೇ 13) ಬೆಳಗಿನ ಜಾವ ಹೃದಯಾಘಾತ ಸಂಭವಿಸಿತ್ತು. ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ ಮಂಜೂರು – ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಬ್ಬಾಳಕರ್ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ನೀಟ್‌ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ...
1 41 42 43 44 45 3,392
Page 43 of 3392