ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್ ; 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್
ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು. ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್...







