ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ಮಾರಾಮಾರಿ : ಹಲವರಿಗೆ ಗಾಯ -ಕಹಳೆ ನ್ಯೂಸ್
ಹಾಸನ: ಇಲ್ಲಿನ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ‍್ಯಾಗಿಂಗ್ ವಿಚಾರಕ್ಕೆ ಸಿನಿಯರ್ ಹಾಗೂ ಜ್ಯೂನಿಯರ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಹಾಸ್ಟೆಲ್‍ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಕಾಲೀಜಿನ ಡೀನ್ ನಟರಾಜ್ ಅವರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ದೂರು ಆಧರಿಸಿ ತನಿಖೆಗೆ...







