ಕ್ರಿಕೆಟ್ ಮಾದರಿಯಲ್ಲೇ ಬಾಸ್ಕೆಟ್ ಬಾಲ್ ಕ್ರೀಡೆಗೂ ಪ್ರೋತ್ಸಾಹ ಅಗತ್ಯ- ಎಚ್ .ಎಸ್ ಬಲ್ಲಾಳ್ -ಕಹಳೆ ನ್ಯೂಸ್
ಉಡುಪಿ: ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಅಧಿಕೃತ ಮಾನ್ಯತೆ ಪಡೆದ ನೂತನ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಇಂದು ಉದ್ಘಾಟನೆಗೊಂಡಿತು. ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಸೋಸಿಯೇಷನ್ ಗೆ ಚಾಲನೆ ನೀಡಿ ಲೋಗೋ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅಸೋಸಿಯೇಷನ್ ನೂತನ ಜಿಲ್ಲಾ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ,ನಗರ ಮಾತ್ರವಲ್ಲ ಗ್ರಾಮೀಣ ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆ ಮತ್ತು ಪ್ರೋತ್ಸಾಹ...







