Wednesday, June 17, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ : ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು -ಕಹಳೆ ನ್ಯೂಸ್

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್‌ ಕುಲಕರ್ಣಿ ಮತ್ತು ಗ್ಯಾಂಗ್‌ ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌ ಸೇರಿದ್ದಾರೆ. ನಟ ದರ್ಶನ್‌ ಸೆಲ್‌ನ ಕೂಗಳತೆ ದೂರದಲ್ಲೇ ಈ ಕೈದಿಗಳು ಇದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹದಿನೇಳು ಜನರನ್ನು ಅಪರಾಧಿಗಳು ಅಂತಾ ತೀರ್ಪು ಪ್ರಕಟಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ನಿನ್ನೆ ಪರಪ್ಪನ ಅಗ್ರಹಾರ ಜೈಲು...
ಸುದ್ದಿ

ಮಂಗಳೂರು : ಎರಡು ಕಿಮೀ ಚಾಲನೆ ಮೂಲಕ ಮಂಗಳೂರು–ಮಂತ್ರಾಲಯ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಸ್ಲೀಪರ್ ಬಸ್‌ಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ-ಕಹಳೆ ನ್ಯೂಸ್

ಕೆಎಸ್ಆರ್‌ಟಿಸಿಯಿಂದ ನಾಲ್ಕು ನಾನ್ ಎಸಿ ಸ್ಲೀಪರ್ ಬಸ್‌ ಮಂತ್ರಾಲಯದೆಡೆಗೆ ಸಂಚಾರ ಆರಂಬಿಸಿದ್ದು, ಈ ಬಸ್ ಕೇವಲ 12ಗಂಟೆಗಳಲ್ಲಿ ಮಂತ್ರಾಲಯ ತಲುಪಲಿದೆ‌. ಈ ಮೂಲಕ ಮಂತ್ರಾಲಯ ಮಂಗಳೂರಿಗರಿಗಿನ್ನು ಬಹಳ ಹತ್ತಿರವಾಗಲಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಬಸ್‌ಗಳಿಗೆ ಚಾಲನೆ ನೀಡಿದರು. ಈ ಬಸ್ ಉಡುಪಿ - ಶಿವಮೊಗ್ಗ - ಚಿತ್ರದುರ್ಗ - ಬಳ್ಳಾರಿ - ಅದೋನಿ ಮಾರ್ಗವಾಗಿ ಮಂತ್ರಾಲಯ ತಲುಪಲಿದೆ. ಮಂಗಳೂರಿನಿಂದ 1500 ರೂ‌., ಉಡುಪಿಯಿಂದ...
ಸುದ್ದಿ

ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು : ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ-ಕಹಳೆ ನ್ಯೂಸ್

ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಕಾದಿಂದ  ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ...
ಸುದ್ದಿ

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌ -ಕಹಳೆ ನ್ಯೂಸ್

ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ.  ಈ ವರ್ಷ ಕೆಆರ್‌ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯದಲ್ಲಿ ನೀರಿನ ಮಟ್ಟ 99 ಅಡಿಗೆ ತಲುಪಿದೆ. ಒಳಹರಿವು 66 ಕ್ಯೂಸೆಕ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ RCB : ಚಿನ್ನಸ್ವಾಮಿಯಲ್ಲಿಂದು ಆರ್‌ಸಿಬಿಯ 100ನೇ ಪಂದ್ಯ -ಕಹಳೆ ನ್ಯೂಸ್

ಬೆಂಗಳೂರು: ಪ್ರತಿ ಐಪಿಎಲ್ ಸೀಸನ್‌ನ ಒಂದು ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡುವ ರೂಢಿಯಿದೆ. ಅಂದರಂತೆ ಇಂದು (ಏ.18) ಡೆಲ್ಲಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರತಿ ಆವೃತ್ತಿಯಲ್ಲಿಯೂ ಗ್ರೀನ್ ಜೆರ್ಸಿ ಧರಿಸುವ ಮೂಲಕ ಆರ್‌ಸಿಬಿ ತಂಡ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತದೆ. ಇದರ ಇನ್ನೊಂದು ವಿಶೇಷತೆಯೆಂದರೆ ಆಟಗಾರರು ಧರಿಸಿರುವ ಎಲ್ಲಾ ಜೆರ್ಸಿಗಳು ಮರುಬಳಕೆಯಾಗಬಲ್ಲ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕೆನ್ನುವ ದೃಷ್ಟಿಯಿಂದ...
ಸುದ್ದಿ

ಅಮೆರಿಕ ನೌಕಾ ದಿಗ್ಬಂಧನ ತೆಗೆಯದಿದ್ರೆ, ಹಾರ್ಮುಜ್‌ ಜಲಸಂಧಿಯನ್ನ ಮತ್ತೆ ಮುಚ್ಚುತ್ತೇವೆ: ಇರಾನ್‌ ವಾರ್ನಿಂಗ್‌ -ಕಹಳೆ ನ್ಯೂಸ್

ಟೆಹ್ರಾನ್: ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಿದೆ ಎಂದು ಇರಾನ್  ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಡೊನಾಲ್ಡ್ ಟ್ರಂಪ್‌ಗೆ  ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಘಾಲಿಬಾಫ್‌, ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವುದನ್ನು ನಿಗದಿತ ಮಾರ್ಗದ ಆಧಾರದ ಮೇಲೆ ಮತ್ತು ಇರಾನಿನ ಅನುಮತಿಯೊಂದಿಗೆ ನಡೆಸಲಾಗುವುದು. ದಿಗ್ಬಂಧನದ ಮುಂದುವರಿಕೆಯಿಂದ ಹಾರ್ಮುಜ್ ಜಲಸಂಧಿಯು ಮುಕ್ತವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ. ಕದನ...
ಸುದ್ದಿ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ -ಕಹಳೆ ನ್ಯೂಸ್

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/-...
ಸುದ್ದಿ

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – ಕಹಳೆ ನ್ಯೂಸ್

ಪಾಟ್ನಾ: ಬಿಹಾರದ  ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ  ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪಾಟ್ನಾದ ಲೋಕ ಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ, ಉಪ ಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ...
1 67 68 69 70 71 3,395
Page 69 of 3395