Thursday, March 19, 2026

ಸುದ್ದಿ

ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ – ಕಹಳೆ ನ್ಯೂಸ್

ಜೈಪುರ್: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ 3 AK-47, 2 ಪಿಸ್ತೂಲ್‌ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ...
ರಾಜ್ಯರಾಷ್ಟ್ರೀಯಸುದ್ದಿ

ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಹಲ್ಲೆ : ರಸ್ತೆ ಮಧ್ಯದಲ್ಲೇ ಮೆರವಣಿಗೆ -ಕಹಳೆ ನ್ಯೂಸ್

ಮಧ್ಯಪ್ರದೇಶ: ಉಜ್ಜಯಿನಿಯಲ್ಲಿ 16 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ನಡೆಸಿ, ಸುಮಾರು 1.5 ಕಿಲೋಮೀಟರ್ ಸಾರ್ವಜನಿಕ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆದ ಬಳಿಕ ಆಕ್ರೋಶ ವ್ಯಕ್ತವಾಗಿದೆ. ಉಜ್ಜಯಿನಿಯ ಮಕ್ಸಿ ರಸ್ತೆಯ ಪನ್ವಾಸ ನಿವಾಸಿ ಅಪ್ರಾಪ್ತ ಬಾಲಕ ಅದೇ ಪ್ರದೇಶದ ಅಪ್ರಾಪ್ತ ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದನು. ಇವರಿಬ್ಬರು ಮೂರು ತಿಂಗಳ ಹಿಂದೆ ಓಡಿಹೋಗಿದ್ದರು. ಬಳಿಕ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಅನಂತರ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ‌ ನಿಂದನೆ ; ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು. ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ...
ರಾಜ್ಯಸುದ್ದಿ

ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ – ಕಹಳೆ ನ್ಯೂಸ್

ಕೋಲ್ಕತ್ತಾ: ಭಾರತದ Gen Z ಪೀಳಿಗೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ ಎಂದು ಬಂಗಾಳದಲ್ಲಿ ಬಿಎಂಸಿಯ ದೊಡ್ಡ ವಿಜಯವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ Gen Z ಬಿಜೆಪಿಯ ಅಭಿವೃದ್ಧಿ ಕ್ರಮದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಜಯವನ್ನು ಉಲ್ಲೇಖಿಸಿದ್ದಾರೆ....
ಜಿಲ್ಲೆಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಇಬ್ಬರಿಗೆ ಗಾಯ, ಓರ್ವ ಸಾವು – ಕಹಳೆ ನ್ಯೂಸ್

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಶಾಂತಪ್ಪ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಶಾಂತಪ್ಪ ಕಾರು ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡ ಹಿನ್ನೆಲೆ ಕಾರು ಪಲ್ಟಿ ಹೊಡೆದು ಮೃತಪಟ್ಟಿದ್ದಾರೆ. ಮಾರೆಪ್ಪ, ಶಿನು ಪವಾರ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗದ ಮರಗಮದಿಬ್ಬಿ ತಾಂಡದವರಾದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಡಿಸಿಎಂ ಡಿಕೆಶಿಯ ದಾವೋಸ್‌ ಪ್ರವಾಸ ರದ್ದು – ಕಹಳೆ ನ್ಯೂಸ್

ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಧಮ್ಕಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ...
ಸುದ್ದಿ

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕಾರಿಸಿದ ಪ್ರಮೋದ್ ಕುಮಾರ್ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್ ಅವರು  ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ನಾಗೇಗೌಡ ಅವರು ತಮ್ಮ ಹುದ್ದೆಯನ್ನು ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಹೊಸ ಉಪ ಪೊಲೀಸ್ ಅಧಿಕಾರಿಯಾಗಿ ಪ್ರಮೋದ್ ಕುಮಾರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು....
ಬೆಂಗಳೂರುರಾಜ್ಯಸುದ್ದಿ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ -ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಮಾರಾಟ ಮಾಡಿರುವುದಾಗಿ ಡೆಕನ್ ಹೆರಾಲ್ಡ್ ಸುದ್ದಿ ಪ್ರಕಟಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಮಾರಾಟದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಒಬ್ಬ ಮುಖ್ಯೋಪಾಧ್ಯಾಯ...
1 73 74 75 76 77 3,296
Page 75 of 3296