ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ -ಕಹಳೆ ನ್ಯೂಸ್
ಚಿಕ್ಕಮಗಳೂರು: ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ. ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ....







