ಬೆಂಗಳೂರು: ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ತಿಳಿಸಿದೆ. ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ (LPG) ಔಟ್‌ಲೆಟ್‌ಗಳು ಮುಚ್ಚಿವೆ. ದಿಢೀರ್ ಬೇಡಿಕೆ ಹೆಚ್ಚಳವಾಗಿರುವ ಕಾರಣ ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ತನ್ನ ಮಾಧ್ಯಮ ಹೇಳಿಕೆಯಲ್ಲಿ ಹೇಳಿದೆ. ಕರ್ನಾಟಕದಲ್ಲಿರುವ 55 ಇಂಡಿಯನ್ ಆಯಿಲ್ ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳಿದೆ....
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಂಜೆ ಬಳಿಕ ಉತ್ತಮ ಮಳೆಯಾಗಿದೆ. ಗಬ್ಬಲಡ್ಕ, ಮುಳ್ಳೇ ರಿಯ, ಬೆಳ್ಳಿಪ್ಪಾಡಿ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿದಿದೆ. ಮಂಗಳೂರಿನಲ್ಲಿ 33.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ. ಸೆ. ಇಳಿಕೆ ಮತ್ತು 24.7 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು. ಭಾರತೀಯ ಹವಾಮಾನಿಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ...
ಮಂಗಳೂರು: ನವಮಂಗಳೂರು ಬಂದರಿಗೆ ಚೀನದಿಂದ 2.7 ಲಕ್ಷ ಮೆ. ಟನ್ ಕಚ್ಚಾ ತೈಲವನ್ನು ಹೇರಿಕೊಂಡು ಲೀಲಾ ಜಾಮ್ ನಗರ್ ಎನ್ನುವ ಹಡಗು ಆಗಮಿಸಿದೆ. ಇದು ಚೀನದ ಜೌಶಾನ್ ಬಂದರಿನಿಂದ ಆಗಮಿಸಿದ್ದು, ಕಚ್ಚಾ ತೈಲವನ್ನು ಮಂಗಳೂರಿನ ಐಎಸ್‌ಪಿಆರ್‌ಎಲ್ ಭೂಗತ ತೈಲಾಗಾರಕ್ಕೆ ಪೂರೈಸುವ ನಿರೀಕ್ಷೆ ಇದೆ. ಈಗಾಗಲೇ 19,600 ಮೆ. ಟನ್ ಎಲ್‌ಪಿಜಿಯೊಂದಿಗೆ ಅಲ್ ಐನ್ ಎನ್ನುವ ನೌಕೆಯೂ ಬಂದರಿಗೆ ಬಂದಿದೆ. ಅಲ್ಲದೆ ಎ. 3ರಂದು ಎಂಆರ್‌ಪಿಎಲ್‌ಗೆ 63,171 ಮೆ. ಟನ್ ರಾಜಸ್ತಾನದ...
ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ...
ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಅಗಸ್ತ್ಯ ಮೃತ...
ಟೆಹ್ರಾನ್: ಹಾರ್ಮುಜ್ ಜಲಸಂಧಿಯ ಬಗ್ಗೆ ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್ ತಿಳಿಸಿದೆ. ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಹಿನ್ನೆಲೆ, ಅಸ್ತವ್ಯಸ್ತಗೊಂಡಿರುವ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿ ಬಗ್ಗೆ ಇರಾನ್ ಪ್ರತಿಕ್ರಿಯಿಸಿದೆ. ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ‘ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಚಿಂತಿಸಬೇಡಿ’ ಎಂದು ಭಾರತದಲ್ಲಿರುವ ಇರಾನ್...