ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ : ವಾಹನ ಸವಾರರ ಪರದಾಟ – ಕಹಳೆ ನ್ಯೂಸ್
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು...







