Saturday, March 7, 2026

ಸುದ್ದಿ

ರಾಷ್ಟ್ರೀಯಸುದ್ದಿ

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ : ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ದುಬೈ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಪ್ರತಿದಾಳಿ ಆರಂಭಿಸಿದ್ದು, ಗಲ್ಫ್‌ನಲ್ಲಿರುವ ಅಮೆರಿಕದ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ ನಡೆಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ದುಬೈ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂಬ ಕುರಿತು...
ಸುದ್ದಿ

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌ – ಕಹಳೆ ನ್ಯೂಸ್

ಟೆಹ್ರಾನ್: ಅಮೆರಿಕ ಜೊತೆಗೆ ಪರಮಾಣು ಶಸ್ತ್ರಾಸ್ತ್ರಗಳ ಒಪ್ಪಂದಕ್ಕೆ ಸಹಿ ಹಾಕದ ಇರಾನ್‌ ಮೇಲೆ ಪ್ರಾಬಲ್ಯ ಮೆರೆಯಲು ಇಸ್ರೇಲ್‌, ಅಮೆರಿಕ ಒಂದಾಗಿವೆ. ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ರಾಜಧಾನಿ ಟೆಹ್ರಾನ್‌ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 30 ಗುರಿಗಳನ್ನು ಟಾರ್ಗೆಟ್‌ ಮಾಡಿ ಇಸ್ರೇಲ್‌ ಕ್ಷಿಪಣಿ ದಾಳಿ ನಡೆಸಿದೆ. ಯಾವುದೇ ಮುನ್ಸೂಚನೆ ನೀಡದೇ ಇರಾನ್‌ ಏಕಾಏಕಿ ಇರಾನ್‌ ಮೇಲೆ ಕ್ಷಿಪಣಿ ಮಳೆಗರೆದಿದೆ. ಟೆಹ್ರಾನ್‌ನಲ್ಲಿ ಸ್ಫೋಟದ ಶಬ್ಧಗಳು ಕೇಳಿಸಿದ್ದು, ದಟ್ಟ ಹೊಗೆ...
ಸುದ್ದಿ

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಬ್ರಹ್ಮ ಕಲಶೋತ್ಸವ ವಾರ್ಷಿಕ ದಿನಾಚರಣೆ : ಶುಧ್ಧ ನೀರಿನ ಘಟಕ,ಸೋಲಾರ್ ದೀಪ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಬ್ರಹ್ಮ ಕಲಶೋತ್ಸವದ ವಾರ್ಷಿಕ ದಿನಾಚರಣೆ ಕಾರ್ಯಕ್ರಮ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಫೆಬ್ರವರಿ 26 ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬೆಳಿಗ್ಗೆ ಪುಣ್ಯಾಹ,ಪಂಚಗವ್ಯ, ಗಣಹೋಮ, ಪವಮಾನ ಸೂಕ್ತಾಭಿಷೇಕ, ನಾಗತಂಬಿಲ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ ಕಟ್ಟೆ ಪೂಜೆ, ಭಜನಾ ಸಂಕೀರ್ತನೆ, ಕಾರ್ತಿಕ ಪೂಜೆ, ರಂಗ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ...
ಸುದ್ದಿ

ಕಣಿಯೂರು: ಫೆ 27ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು. ಈ ಸಂಧರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಇಸ್ಮಾಯಿಲ್,ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ,ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್,ಸೇವಾಪ್ರತಿನಿಧಿ ಪ್ರೇಮ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ,ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು...
ಸುದ್ದಿ

ರಾಜಸ್ಥಾನ, ಗುಜರಾತ್‌ಗೆ ಇಂದು ಮೋದಿ ಭೇಟಿ : 37,000 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು (ಫೆ.28) ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಿ, 37,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಮೊದಲು ರಾಜಸ್ಥಾನಕ್ಕೆ  ಭೇಟಿ ನೀಡಲಿರುವ ಅವರು 16,680 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ನಗರಾಭಿವೃದ್ಧಿ, ಶುದ್ಧ ಕುಡಿಯುವ ನೀರು, ರಸ್ತೆ ಜಾಲಗಳು, ನೀರಾವರಿ, ಇಂಧನ ಮತ್ತು ಕೈಗಾರಿಕಾ ಮೂಲಸೌಕರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಅಮೃತಸರ-ಜಾಮ್‌ನಗರ ಆರ್ಥಿಕ ಕಾರಿಡಾರ್‌ನ ಒಂದು...
ಸುದ್ದಿ

ಕುಂಟಿಕಾನದಲ್ಲಿ ಮಕ್ಕಳ ಕಳ್ಳರು : ವೈರಲ್ ಲೇಡಿ ವಾಯ್ಸ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕಮಿಷನ‌ರ್ – ಕಹಳೆ ನ್ಯೂಸ್

ಮಂಗಳೂರು: ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಅಡಿಯೋ ಹಿಂದಿನ ಸತ್ಯ: ವಾಯ್ಸ್ ಮೆಸೇಜ್ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ, “ರಸ್ತೆಯಲ್ಲಿ ಕೆಲವು ವಿದ್ಯಾರ್ಥಿಗಳು ಮಾತನಾಡಿಕೊಳ್ಳುತ್ತಿದ್ದ ವಿಷಯವನ್ನು ಕೇಳಿಸಿಕೊಂಡು ನಾನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಆರು ಮಂದಿ ಅಂತರ್‌ರಾಜ್ಯ ಸೈಬರ್ ವಂಚಕರು ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್‌ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27) ಮತ್ತು ಉತ್ಪಲ ಸಂತೋಷ್ ಕೃಷ್ಣ (35), ಕರ್ನೂಲಿನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36), ಬುಡೆ ಶ್ರೀನಿವಾಸ (38) ಮತ್ತು...
ಸುದ್ದಿ

ಇಂದಿನಿಂದ ದ್ವಿತೀಯ PUC ಪರೀಕ್ಷೆ ; ಅಕ್ರಮ ತಡೆಗೆ ಕಟ್ಟೆಚ್ಚರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1  ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಪೂರ್ವ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ...
1 7 8 9 10 11 3,283
Page 9 of 3283