ಮೈಸೂರು ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ – ಕಹಳೆ ನ್ಯೂಸ್
ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇಂದು ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದು, ಈ ವೇಳೆ ನ್ಯಾಯಾಲಯದ ಇಮೇಲ್ ಪರಿಶೀಲಿಸುತ್ತಿದ್ದಾಗ ಬಾಂಬ್ ಬೆದರಿಕೆ ಸಂದೇಶ ಕಂಡುಬಂದಿದೆ. ಸಿಬ್ಬಂದಿಗಳು, ಅಧಿಕಾರಿಗಳು, ವಕೀಲರು, ನ್ಯಾಯಧೀಶರು,...






