ಇಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಕೆಡ್ಡಸ ಆಚರಣೆ-ಕಹಳೆ ನ್ಯೂಸ್
ಕಲ್ಲಡ್ಕ : ಇಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ “ಕೆಡ್ಡಸ” ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಉಪಸ್ಥಿತಿಯಲ್ಲಿ, ತುಳಸಿ ಕಟ್ಟೆಯ ಮುಂದೆ ಗೋಮಯದಿಂದ ಶುದ್ದೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ , ದೀಪ ಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಪುಡಿ, ಅರಿಸಿನ ಕುಂಕುಮ, ಪಚ್ಚೆ ಹೆಸರುಪುಡಿ, ವೀಳೆದ್ಯೆಲೆ...







