ಗುಜಾರಾತ್ನ ಸೂರತ್ ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 14 ಮಂದಿ ಕಾರ್ಮಿಕರ ದುರ್ಮರಣ, ಇದಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್
ಸೂರತ್: ಧಾರವಾಡದಲ್ಲಿ ನಡೆದ ಭೀಕರ ಅಪಘಾತದ ಬೆನ್ನಲ್ಲೇ ಗುಜಾರಾತ್ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಕಾರ್ಮಿಕರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಈ ಪರಿಣಾಮ ಘಟನೆಯಲ್ಲಿ 14 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲ ಕಾರ್ಮಿಕರು ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ....







