ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಂಧಲೆ, ಮೊಬೈಲ್ ಟವರ್ ಗೆ ಹಾನಿ – ಕಹಳೆ ನ್ಯೂಸ್
ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ. ಪಂಜಾಬ್ ರಾಜ್ಯದ ಬಟಿಂಡಾದಲ್ಲಿ ರೈತರು ಬಿಜೆಪಿ ಕಚೇರಿ ಮೇಲೆ ಗುರಿಯಾಗಿಟ್ಟು ದಾಳಿ ಮಾಡಿದ್ದಾರೆ. ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲಿ...







