ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ – ಹೈಕೋರ್ಟ್ಗೆ ವಾಣಿ ವಿಲಾಸ ಆಸ್ಪತ್ರೆ ವೈದ್ಯರು ವರದಿ ಸಲ್ಲಿಕೆ – ಕಹಳೆ ನ್ಯೂಸ್
ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಜೈಲುಪಾಲಾಗಿ, ಈಗ ಅನಾರೋಗ್ಯದಿಂದ ಬಳಲುತ್ತಿರುವ ನಟಿ ಸಂಜನಾ ಗಲ್ರಾನಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾಣಿವಿಲಾಸ ಆಸ್ಪತ್ರೆ ವೈದ್ಯರು ಹೈಕೋರ್ಟ್ಗೆ ವರದಿ ಸಲ್ಲಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಜಾಮೀನು ನೀಡುವಂತೆ ಕೋರಿ ನಟಿ ಸಂಜನಾ ಗಲ್ರಾನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಸಿಬಿ ಪರ ವಿಶೇಷ ಅಭಿಯೋಜಕ ವೀರಣ್ಣ ತಿಗಡಿ...







