ದ್ವಿಚಕ್ರವಾಹನದಲ್ಲಿ ಸವಾರಿ ಮಾಡುವ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಆದೇಶ-ಕಹಳೆ ನ್ಯೂಸ್
ಬೆಂಗಳೂರು: ಹೆಲ್ಮೆಟ್' ಹಾಕದೆ ಗಾಡಿ ಓಡಿಸಿದ್ರೆ 'ಮೂರು ತಿಂಗಳು ಪರವಾನಗಿ ಅಮಾನತು ಮಾಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಆದೇಶವನ್ನು ಹೊರಡಿಸಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರರು ( ಹಿಂಬದಿ ಸವಾರ ಸೇರಿದಂತೆ) ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. 2019ರಲ್ಲಿ 1.51 ಲಕ್ಷ ರಸ್ತೆ ಅಪಘಾತ ಗಳಲ್ಲಿ ಶೇ.36ರಷ್ಟು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ. ಈ...







