Friday, March 13, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಸಿಎಂ ಬಿಎಸ್ವೈ ಭೇಟಿಯಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಗೆ ಬರುವವರಿಗೆ ಕೋವಿಡ್ 19 ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾ ಅಥವಾ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಬರುವ ಜನರಿಗೆ ಆಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ. ವರದಿ ನೆಗೆಟಿವ್ ಬಂದರೆ ಮಾತ್ರ ಸಿಎಂ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಕೊರನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯದ...
ಹೆಚ್ಚಿನ ಸುದ್ದಿ

‘ಅಕ್ಟೋಬರ್ 16’ ರವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ‘ರಾಜ್ಯ ಸರ್ಕಾರ’ದಿಂದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ...
ಹೆಚ್ಚಿನ ಸುದ್ದಿ

BIG BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು-ಕಹಳೆ ನ್ಯೂಸ್

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ...
ಹೆಚ್ಚಿನ ಸುದ್ದಿ

BREAKING NEWS : ಕೇಂದ್ರ ಶಿಕ್ಷಣ ಸಚಿವಾಲಯದಿಂದ ‘ಶಾಲಾ-ಕಾಲೇಜು ಪುನರಾರಂಭ’ಕ್ಕೆ ‘ಮಾರ್ಗಸೂಚಿ’ ರಿಲೀಸ್ : ಈ ನಿಮಯಗಳ ಪಾಲನೆ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಅಕ್ಟೋಬರ್ 15 ರಿಂದ ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜು ಪುನರ್ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಸರ್ಕಾರವು ಶಾಲಾ-ಕಾಲೇಜು ಆರಂಭದ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಶಾಲೆ ಹಾಗೂ ಸ್ಥಳೀಯ ಆಡಳಿತದ ಸಮಾಲೋಚನೆಯೊಂದಿಗೆ ಷರತ್ತುಗಳ ಅನ್ವಯವಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವುದಾಗಿ ತಿಳಿಸಿದೆ. ಈ ಹಿಂದೆ ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಶಾಲಾ-ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿತ್ತು....
ಹೆಚ್ಚಿನ ಸುದ್ದಿ

ಏಮ್ಸ್ ವರದಿಯಿಂದ ಕೊನೆಗೂ ಬಹಿರಂಗವಾಯ್ತು ಸುಶಾಂತ್ ಸಾವಿನ ರಹಸ್ಯ..!-ಕಹಳೆ ನ್ಯೂಸ್

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಾಲಿವುಡ್ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಕುರಿತು ಅಂತಿಮ ವರದಿಯನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಸಲ್ಲಿಸಿದ್ದು, ಮಹತ್ವದ ಸಂಗತಿಯೊಂದನ್ನು ತಿಳಿಸಿದೆ. ಸುಶಾಂತ್ ಸಾವಿಗೆ ಕೊಲೆ ಕಾರಣವಲ್ಲ, ಇದೊಂದು ಆತ್ಮಹತ್ಯೆ ಎಂದು ಖ್ಯಾತ ವೈದ್ಯ ಡಾ. ಸುೀರ್ ಗುಪ್ತಾ ಅವರ ನೇತೃತ್ವದ ಏಮ್ಸ್ ವೈದ್ಯಕೀಯ ತಂಡ ತಿಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರೊಂದಿಗೆ ಸುಶಾಂತ್ ಸಾವು...
ಹೆಚ್ಚಿನ ಸುದ್ದಿ

ಪ್ರಧಾನಿ ಮೋದಿಯಿಂದ ವಿಶ್ವದ ಅತಿ ಉದ್ದನೆಯ ಹೆದ್ದಾರಿ ಸುರಂಗ ‘ಅಟಲ್​ ಟನಲ್’ ಲೋಕಾರ್ಪಣೆ-ಕಹಳೆ ನ್ಯೂಸ್

ನವದೆಹಲಿ : ಮನಾಲಿಯನ್ನು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಯೊಂದಿಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಭಾರೀ ಹಿಮಪಾತದ ಮಧ್ಯೆ ಪ್ರತಿವರ್ಷ ಆರು ತಿಂಗಳ ಕಾಲ ಕಣಿವೆಯನ್ನು ನಿರ್ಬಂಧಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಸುರಂಗವನ್ನು ನಿರ್ಮಾಣ ಮಾಡಲಾಗಿದ್ದು, ಇದರಿಂದ ಜನರಿಗೆ ಅನುಕೂಲವಾಗಿದೆ . ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್...
ಹೆಚ್ಚಿನ ಸುದ್ದಿ

ಹತ್ರಾಸ್‌ಗೆ ಹೊರಟಿದ್ದ ರಾಹುಲ್‌ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು;ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಹೈ ಡ್ರಾಮಾ-ಕಹಳೆ ನ್ಯೂಸ್

ಲಖ್ನೋ,ಅ.1- ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಖಂಡಿಸಿ ಹತ್ರಾಸ್‍ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರಪ್ರದೇಶದ ಪೊಲೀಸರು ಕೆಲಕಾಲಕ್ಕೆ ವಶಕ್ಕೆ ಪಡೆದುಕೊಂಡರು. ಯುಮುನಾ ಎಕ್ಸ್‍ಪ್ರೆಸ್ ಹೈವೇ ಮೂಲಕ ಹತ್ರಾಸ್‍ಗೆ ತೆರಳುತ್ತಿದ್ದ ರಾಹುಲ್ ಅವರನ್ನು ಭಾರತೀಯ ದಂಡ ಸಂಹಿತೆ ಕೆಲ ಸೆಕ್ಷನ್‍ಗಳ ಅನ್ವಯ ಪೊಲೀಸರು...
ಹೆಚ್ಚಿನ ಸುದ್ದಿ

BREAKING NEWS : ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ-ಕಹಳೆ ನ್ಯೂಸ್

ಬೆಂಗಳೂರು : ತೀವ್ರ ವಿರೋಧದ ನಡುವೆಯೂ ರಾಜ್ಯದ ವಿಧಾನಮಂಡಲದ ಅಧಿವೇಶನದಲ್ಲಿ ಮೂರು ಕೃಷಿ ಕಾಯ್ದೆಗಳಿಗೆ ಅನುಮೋದನೆ ನೀಡಲಾಗಿತ್ತು. ಇಂತಹ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವಂತ ನಿರ್ಧಾರಕ್ಕೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಮೂಲಕ ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತರಲಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಚಿವ...
1 164 165 166 167 168 174
Page 166 of 174