ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನಿಲ್ಲ- ಕಹಳೆ ನ್ಯೂಸ್
ವಿಟ್ಲ: ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ...







