ಸಂವಿಧಾನ ವಿರೋಧಿ ಮತ್ತು ಹಿಂದೂ ವಿರೋಧಿ “ಕರ್ನಾಟಕ ರೋಹಿತ್ ವೇಮುಲಾ ಬಿಲ್-2025” ಮತ್ತು “ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆ ಕಾಯಿದೆ-2025” ವಿರೋಧಿಸಿ ಪ್ರಮುಖ ಶಾಸಕರಿಗೆ ಮನವಿ -ಕಹಳೆ ನ್ಯೂಸ್
ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಮುಂಬರುವ ಮಳೆಗಾಲ ಅಧಿವೇಶನದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಎರಡು ವಿವಾದಾತ್ಮಕ ಮಸೂದೆಗಳಾದ "ಕರ್ನಾಟಕ ರೋಹಿತ್ ವೇಮುಲಾ ಬಿಲ್-2025" ಮತ್ತು "ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆ ಕಾಯಿದೆ-2025" ವಿರೋಧಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಅನೇಕ ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಭಾಜಪದ ರಾಜ್ಯಾಧ್ಯಕ್ಷ ಶ್ರೀ ಬಿ. ವೈ. ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ,...







