ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ ; ತೇಜಸ್ವಿ ಸೂರ್ಯ-ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು...







