Wednesday, March 11, 2026

ಅಂಕಣ

ಅಂಕಣಅಂತಾರಾಷ್ಟ್ರೀಯಸುದ್ದಿ

ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌-ಕಹಳೆ ನ್ಯೂಸ್

ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಗಸ  ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ...
ಅಂಕಣಮೈಸೂರುಸುದ್ದಿ

ಇಂದು ಮಹಿಷ ದಸರಾ ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

– ದಸರಾದಲ್ಲಿ ಶತಮಾನದ ವಿಂಟೇಜ್‌ ಕಾರುಗಳ ಕಲರವ ಮೈಸೂರು: ನಗರದಲ್ಲಿಂದು ಮಹಿಷ ದಸರಾ  ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್  ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ. ದಸರಾ...
ಅಂಕಣಬೆಂಗಳೂರುಸುದ್ದಿ

ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ-ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ ; ಎಬಿವಿಪಿ-ಕಹಳೆ ನ್ಯೂಸ್

ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ‌ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ ಎಬಿವಿಪಿ ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದೆ. ರಾಜ್ಯದ 430ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೆ ಕಳೆದ ಒಂದೂವರೆ ತಿಂಗಳಿನಿಂದ...
ಅಂಕಣಸುದ್ದಿ

ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು-ಕಹಳೆ ನ್ಯೂಸ್

ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ‌...
ಅಂಕಣದೆಹಲಿಸುದ್ದಿ

Air India Plane Crash ; ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ-ಕಹಳೆ ನ್ಯೂಸ್

– ಪ್ರಾಥಮಿಕ ತನಿಖಾ ವರದಿಯ ಕೆಲ ಅಂಶಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ – ಕೇಂದ್ರ ಮತ್ತು ಡಿಜಿಸಿಎ ಪ್ರತಿಕ್ರಿಯೆ ಕೇಳಿದ ಕೋರ್ಟ್ ನವದೆಹಲಿ: ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ...
ಅಂಕಣಸುದ್ದಿ

ನಿತಿನ್ ಶಿವಾಂಶ್ ಜೊತೆ ಪ್ರೀತಿ ಗುಟ್ಟು ರಟ್ಟು ಮಾಡಿದ ಖ್ಯಾತ ಗಾಯಕಿ ಸುಹಾನಾ ಸಯ್ಯದ್-ಕಹಳೆ ನ್ಯೂಸ್

ಸರಿಗಮಪ ರಿಯಾಲಿಟಿ ಶೋ ಮೂಲಕ ಭಾರೀ ಜನಪ್ರಿಯತೆ ಗಳಿಸಿರುವ ಕನ್ನಡದ ಖ್ಯಾತ ಗಾಯಕಿ ಸುಹಾನಾ ಸಯ್ಯದ್  ಇದೀಗ ಪ್ರೀತಿಸುತ್ತಿರುವ ಹುಡುಗನ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ. ಹಿಂದೊಮ್ಮೆ ಹಿಂದೂ ದೇವರ ಭಜನೆ ಹಾಡಿದ್ದಕ್ಕೆ ವಿವಾದಕ್ಕೀಡಾಗಿದ್ದ ಗಾಯಕಿ. ಶಿವಮೊಗ್ಗದ ಸಾಗರದ ಚೆಲುವೆ, ಸಿನಿಮಾಗಳಲ್ಲೂ ಹಿನ್ನೆಲೆ ಗಾಯಕನ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಇದೀಗ ನಿರ್ಭೀತಿಯಿಂದ ತಾವು ಪ್ರೀತಿಸುತ್ತಿರುವ ಹುಡುಗನನ್ನು ಪರಿಚಯ ಮಾಡಿಸಿಕೊಟ್ಟಿದ್ದಾರೆ. ನಿತಿನ್ ಶಿವಾಂಶ್ ಜೊತೆ ಪ್ರೀತಿಯ ಗುಟ್ಟನ್ನ ರಟ್ಟು ಮಾಡಿರುವ ಸುಹಾನಾ ಸಯ್ಯದ್,...
ಅಂಕಣಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ; ಮೊದಲು ಎಷ್ಟು? ಈಗ ಎಷ್ಟು ಇಳಿಕೆ?-ಕಹಳೆ ನ್ಯೂಸ್

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ  ಪರಿಷ್ಕರಣೆಯಾದ ಬೆನ್ನಲ್ಲೇ ಇಂದಿನಿಂದಲೇ ನಂದಿನಿಯ  ಕೆಲ ಉತ್ಪನ್ನಗಳ ದರ ಇಳಿಕೆಯಾಗಿದೆ.  ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ...
ಅಂಕಣಸುದ್ದಿ

ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ ; ವೀರೇಂದ್ರ ಹೆಗ್ಗಡೆ- ಕಹಳೆ ನ್ಯೂಸ್

ಮಂಗಳೂರು: ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ. ಅದೇ ರೀತಿ ಮುಂದೆ ಎಲ್ಲಾ ಕಷ್ಟಗಳು ಜಾರಿ ಹೋಗುತ್ತವೆ ಎಂದು ಧರ್ಮಸ್ಥಳ  ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು  ಹೇಳಿದ್ದಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ಎಸ್.ಡಿ.ಎಂ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ, ಇತ್ತೀಚೆಗೆ ನಡೆದ ಆಘಾತಗಳಿಂದ ನಾನು ಕೂಡ ಜರ್ಜರಿತಗೊಂಡಿದ್ದೇನೆ. ಅನಾವಶ್ಯಕವಾಗಿ ಷಡ್ಯಂತ್ರ ನಡೆಯುತ್ತಿದೆ. ಷಡ್ಯಂತ್ರ ಎಂದು ಕೋರ್ಟ್‍ನಲ್ಲೇ ಗೊತ್ತಾಗಿದೆ. ಎತ್ತರದ...
1 17 18 19 20 21 43
Page 19 of 43