ರಕ್ಷಾಬಂಧನದ ನಿಮಿತ್ತ ವಿಶೇಷ ಲೇಖನ-ಕಹಳೆ ನ್ಯೂಸ್
ಇತಿಹಾಸ ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’ ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು. ಭಾವನಿಕ ಮಹತ್ವ ರಾಖಿಯನ್ನು ಸಹೋದರಿಯು ಸಹೋದರನ ಕೈಗೆ ಕಟ್ಟುವುದಿರುತ್ತದೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ....






