ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ; ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ-
ಟೋಕಿಯೊ: ಜಪಾನ್ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ ಜಪಾನಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿಯಾಗಿರುವ 64 ವರ್ಷದ ಸನೆ ತಾಕೈಚಿ ಅವರನ್ನು ಪ್ರಧಾನಿಯನ್ನಾಗಿ ಸಂಸತ್ತು ಆಯ್ಕೆ ಮಾಡಿದೆ. ಶಿಂಜೊ ಅಬೆ ಅವರ ಶಿಷ್ಯೆಯಾಗಿದ್ದ ತಕೈಚಿ, ಅಬೆ ಅವರ ಪ್ರಧಾನಿ ಅವಧಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಅಕ್ಟೋಬರ್ 4ರಂದು ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸನೆ...







