ಹಾರ್ಮುಝ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ಕ್ಷಿಪಣಿ ದಾಳಿ: ಒಮಾನ್ ನೌಕಾಪಡೆಯಿಂದ ಬಂಟ್ವಾಳದ ಯುವಕನ ರಕ್ಷಣೆ-ಕಹಳೆ ನ್ಯೂಸ್
ಮಂಗಳೂರು ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ರಚನ್ ಆರ್.ಕೆ. ಸೇರಿದಂತೆ 10 ಮಂದಿ ಭಾರತೀಯ ನಾವಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾಳಿಗೆ ತುತ್ತಾದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯನ್ನು ಒಮನ್ ನೌಕಾಪಡೆ (Oman Navy) ಯಶಸ್ವಿಯಾಗಿ ರಕ್ಷಿಸಿದ್ದು, ಸದ್ಯ ರಚನ್ ಸುರಕ್ಷಿತವಾಗಿ ದುಬೈಗೆ ಪ್ರಯಾಣ...







