ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಪಣತೊಟ್ಟ ಇಸ್ರೇಲ್ ; ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಅಲ್-ಮಘಾಝಿ ಉಗ್ರರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ, 30 ಮಂದಿ ಮಟಾಶ್..! – ಕಹಳೆ ನ್ಯೂಸ್
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ. ಅದರಂತೆ ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಶಿಬಿರವೊಂದರ ಮೇಲೆ ನಡೆಸಿದ ವಾಯು ದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸೆಂಟ್ರಲ್ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ...







