ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜಧಾನಿ ದೆಹಲಿಯಲ್ಲಿ ಪಾಕಿಸ್ತಾನದ ಉಗ್ರರಿಂದ ಡ್ರೋನ್ ದಾಳಿಗೆ ಸಂಚು ; ಗುಪ್ತಚರ ಸಂಸ್ಥೆಗಳು ಮುನ್ನೆಚ್ಚರಿಕೆ – ಹೈ ಅಲರ್ಟ್ – ಕಹಳೆ ನ್ಯೂಸ್
ನವದೆಹಲಿ(ಜು.21): ಆ.15ರ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜಧಾನಿ ದೆಹಲಿಯಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಡ್ರೋನ್ ಬಳಸಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಮುನ್ನೆಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮುಂಗಾರು ಅಧಿವೇಶನ ಸಂದರ್ಭ ಮತ್ತು ಸ್ವಾತಂತ್ರ್ಯೋತ್ಸವದ ವೇಳೆ ಪಾಕಿಸ್ತಾನ ಮೂಲಕ ಉಗ್ರ ಸಂಘಟನೆಗಳು ಡ್ರೋನ್ ಬಳಸಿ ಮೂಲಕ ದಾಳಿ ನಡೆಸುವ ಸಾಧ್ಯತೆ ಇದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ...







