Monday, September 7, 2026

ಅಂತಾರಾಷ್ಟ್ರೀಯ

ಅಂಕಣಅಂತಾರಾಷ್ಟ್ರೀಯಸುದ್ದಿ

ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ; ಬಲಪಂಥೀಯ ನಾಯಕಿ ಸನೆ ತಾಕೈಚಿ ಆಯ್ಕೆ-

ಟೋಕಿಯೊ: ಜಪಾನ್ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ  ಜಪಾನಿನ  ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತರೂಢ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷದ ಕಟ್ಟಾ ಸಂಪ್ರದಾಯವಾದಿಯಾಗಿರುವ 64 ವರ್ಷದ ಸನೆ ತಾಕೈಚಿ ಅವರನ್ನು ಪ್ರಧಾನಿಯನ್ನಾಗಿ ಸಂಸತ್ತು ಆಯ್ಕೆ ಮಾಡಿದೆ. ಶಿಂಜೊ ಅಬೆ ಅವರ ಶಿಷ್ಯೆಯಾಗಿದ್ದ ತಕೈಚಿ, ಅಬೆ ಅವರ ಪ್ರಧಾನಿ ಅವಧಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಅಕ್ಟೋಬರ್‌ 4ರಂದು ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸನೆ...
ಅಂಕಣಅಂತಾರಾಷ್ಟ್ರೀಯಸುದ್ದಿ

ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು ; ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ-ಕಹಳೆ ನ್ಯೂಸ್

ಕಳೆದ ಏಪ್ರಿಲ್‌ನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಗೂ ಕೆಲ ಸಮಯಕ್ಕೂ ಮುನ್ನ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ವಿರುದ್ಧದ ಹಲವಾರು ಹೇಳಿಕೆ ನೀಡಿದ್ದರು. ಇದು ಆತನ ಭಾರತ ವಿರೋಧಿ ನಿಲುವನ್ನು ಬಹಿರಂಗಪಡಿಸಿತ್ತು. ಇಸ್ಲಾಮಾಬಾದ್: ಕಳೆದ ಏಪ್ರಿಲ್‌ನಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯಾನಕ ಭಯೋತ್ಪಾದಕ ದಾಳಿ ನಡೆದಿತ್ತು. ಈ ದಾಳಿಗೂ ಕೆಲ ಸಮಯಕ್ಕೂ ಮುನ್ನ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತದ ವಿರುದ್ಧದ ಹಲವಾರು...
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ ; ರಷ್ಯಾ-ಕಹಳೆ ನ್ಯೂಸ್

ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್  ಹೇಳಿದ್ದಾರೆ. ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್‌ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ...
ಅಂಕಣಅಂತಾರಾಷ್ಟ್ರೀಯಸುದ್ದಿ

ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ ; ಪಾಕ್‌ ಸಚಿವ ಆರೋಪ-

ಇಸ್ಲಾಮಾಬಾದ್‌: ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್  ಆರೋಪಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು ಯುದ್ಧದ ನಿರ್ಧಾರಗಳನ್ನ ಕಾಬೂಲ್‌ನಲ್ಲಿ ಅಲ್ಲ ಭಾರತದ ನವದೆಹಲಿಯಲ್ಲಿ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಇದೇ ವೇಳೆ ಕದನ ವಿರಾಮದ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ತಾಲಿಬಾನ್‌ನ  ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇತ್ತೀಚೆಗೆ ಭಾರತಕ್ಕೆ ಭೇಟಿ ನೀದ್ದಾಗ ಪ್ಲ್ಯಾನ್‌ ರೂಪಿಸಿದ್ದಾರೆ....
ಅಂಕಣಅಂತಾರಾಷ್ಟ್ರೀಯಸುದ್ದಿ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ; ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ-ಕಹಳೆ ನ್ಯೂಸ್

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ  ಹೃದಯಸ್ತಂಭನದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ  ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು...
ಅಂಕಣಅಂತಾರಾಷ್ಟ್ರೀಯಸುದ್ದಿ

ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ ; ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರದ ರಕ್ಷಣೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳನ್ನ ಅನಧಿಕೃತವಾಗಿ ತಮ್ಮ ಬಳಿ ಸಂಗ್ರಹಿಸಿದ್ದ ಹಾಗೂ ಕೆಲ ವರ್ಷದ ಹಿಂದೆ ಚೀನಾ ಜೊತೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ಮುಂಬೈ ಮೂಲದ ಅಮೆರಿಕನ್ ವಿಶ್ಲೇಷಕ ಹಾಗೂ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್‌ರನ್ನ  ಬಂಧಿಸಲಾಗಿದೆ. 64 ವರ್ಷದ ಆಶ್ಲೇ ಟೆಲ್ಲಿಸ್ ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ 1000ಕ್ಕೂ ಹೆಚ್ಚು ಪುಟಗಳಷ್ಟು ರಹಸ್ಯ...
ಅಂಕಣಅಂತಾರಾಷ್ಟ್ರೀಯಸುದ್ದಿ

ಚೀನಾ ಮೇಲೆ 100% ಸುಂಕ ವಿಧಿಸಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಮೇಲೆ ಹೆಚ್ಚುವರಿ ಶೇ.100 ರಷ್ಟು ಸುಂಕವನ್ನು  ಘೋಷಿಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಧಿಸಿದಂತೆ ಚೀನಾ ಜೊತೆಗಿನ ಅಮೆರಿಕ ವ್ಯಾಪಾರ ಯುದ್ಧವನ್ನು ಮತ್ತೆ ಪ್ರಾರಂಭಿಸಿದ್ದಾರೆ. ಚೀನಾ ಕೆಲವೊಂದು ಅಸಾಧಾರಣ ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ಪ್ರತಿಕಾರವಾಗಿ, ಎಲ್ಲಾ ನಿರ್ಣಾಯಕ ಸಾಫ್ಟ್‌ವೇರ್‌ಗಳ ಮೇಲಿನ ಹೆಚ್ಚುವರಿ ಸುಂಕಗಳು ನ.1ರಿಂದಲೇ ಜಾರಿಗೆ ಬರಲಿವೆ. ಯುಎಸ್‌...
ಅಂಕಣಅಂತಾರಾಷ್ಟ್ರೀಯಸುದ್ದಿ

ಟ್ರಂಪ್‌ಗೆ ಭಾರೀ ಮುಖಭಂಗ ; ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌-ಕಹಳೆ ನ್ಯೂಸ್

ಓಸ್ಲೋ: ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ. ವೆನೆಜುವೆಲಾದ   ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ...
1 3 4 5 6 7 26
Page 5 of 26