ಕಾಬೂಲ್ ಮೇಲೆ ಪಾಕ್ ಏರ್‌ಸ್ಟ್ರೈಕ್ ; ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್ ಬಂದ್-ಕಹಳೆ ನ್ಯೂಸ್
ಕಾಬೂಲ್/ ಇಸ್ಲಾಮಾಬಾದ್: ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ದೇಶದ...







