ಆರ್‌ಎಸ್‌ಎಸ್ ಸೇರ್ಪಡೆಗೊಳ್ಳಲಿದ್ದಾರೆ ಕೇರಳ ಮಾಜಿ ಡಿಜಿಪಿ ಜಾಕೋಬ್ ಥಾಮಸ್ – ಕಹಳೆ ನ್ಯೂಸ್
ಕೊಚ್ಚಿ - ಕೇರಳದ ಮಾಜಿ ಪೊಲೀಸ್ ಮಹಾ ನಿರ್ದೇಶಕ ಜಾಕೋಬ್ ಥಾಮಸ್ ಅವರು ಪೂರ್ಣಾವಧಿ ಪ್ರಚಾರಕರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕ್ರೈಸ್ತ ಸಮುದಾಯದ ಮೇಲೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಆಕ್ರಮಣಕಾರಿಯಾಗಿ ಪ್ರಭಾವ ಬೀರುತ್ತಿರುವ ಸನ್ನಿವೇಶದಲ್ಲಿ ಜಾಕೋಬ್ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಇಂದು ಎರ್ನಾಕುಲಂ ಜಿಲ್ಲೆಯ ಪಳ್ಳಕ್ಕರದಲ್ಲಿ ಗಣವೇಷ ಎಂದು ಹೆಸರಾದ ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿ ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಪಾಲ್ಗೊಳ್ಳುವುದಾಗಿ ಟಿಎನ್‌ಐಇ ಜೊತೆಗೆ ನಡೆಸಿದ ಸಂವಾದದ...







