ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ : ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ – ಕಹಳೆ ನ್ಯೂಸ್
ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು....







