ಅಡುಗೆ ಮಾಡುತ್ತಿದ್ದ ಸಹೋದರನ ಪತ್ನಿಯ ಮೇಲೆರಗಿದ ಕಾಮುಕ ಜಾಫರ್ಖಾನ್ ಗೆ 10 ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸಿದ ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್ – ಕಹಳೆ ನ್ಯೂಸ್
ಕೊಚ್ಚಿ: ಸಹೋದರನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಜಾಫರ್ಖಾನ್ (48) ಶಿಕ್ಷೆಗೆ ಗುರಿಯಾದ ಆರೋಪಿ. ಈತ ಕೇರಳದ ಕಟ್ಟಕಾಡದ ನಿವಾಸಿ. 10 ವರ್ಷಗಳ ಶಿಕ್ಷೆಯ ಜತೆಗೆ 50 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. ಒಂದು ವೇಳೆ ದಂಡವನ್ನು ಪಾವತಿಸಲು ಸಾಧ್ಯವಾಗದಿದ್ದರೆ, ಅದರ ಬದಲಾಗಿ ಹೆಚ್ಚುವರಿ ಐದು ತಿಂಗಳು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಪ್ರಾಸಿಕ್ಯೂಷನ್ ಪರವಾಗಿ...






