ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ – ಕಹಳೆ ನ್ಯೂಸ್
ಬೆಂಗಳೂರು / ಮಂಗಳೂರು : ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿಯಾಗಿದ್ದ ಸಂತ್ರಸ್ತೆಯ ತಂದೆಯನ್ನು ಖುಲಾಸೆಗೊಳಿಸುವಾಗ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಪೊಲೀಸ್...







