ಧರ್ಮಸ್ಥಳ ಕೇಸ್ ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ-ಕಹಳೆ ನ್ಯೂಸ್
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಗೆ ಟ್ವಿಸ್ಟ್...







