ಬೆಂಗ್ಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ – ಇಬ್ಬರು ದುರ್ಮರಣ, 20 ಮಂದಿಗೆ ಗಾಯ – ಕಹಳೆ ನ್ಯೂಸ್
ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ. ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್ಗೆ ಬಸ್ ಬಿದ್ದಿದ್ದು, ಬಸ್ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ...







