Friday, March 6, 2026

ರಾಜ್ಯ

ಜಿಲ್ಲೆದೆಹಲಿರಾಜ್ಯಸುದ್ದಿ

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ – ಕಹಳೆ ನ್ಯೂಸ್

ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು. ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ಮಿಲಿಟರಿ ಸಂಘರ್ಷದ ಮೂಲಕ ಮಾತ್ರ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎನ್ನುವುದನ್ನು ಒಪ್ಪುತ್ತೇವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಲಿ ಸಂಘರ್ಷ ತ್ವರಿತ ಅಂತ್ಯಕ್ಕಾಗಿ ನಾವು...
ದೆಹಲಿರಾಜ್ಯಸುದ್ದಿ

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ :ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ – ಕಹಳೆ ನ್ಯೂಸ್

ನವದೆಹಲಿ/ಮಾಸ್ಕೋ: ಮಧ್ಯಪ್ರಾಚ್ಯದ ಯುದ್ಧದ ವಾತಾವರಣದಿಂದಾಗಿ ತೈಲ ಪೂರೈಕೆ ಮಾರ್ಗ ಹಾರ್ಮುಜ್ ಜಲಸಂಧಿ ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಆರ್ಥಿಕ ಅಪಾಯ ತಂದೊಡ್ಡಿದೆ. 27 ಭಾರತೀಯ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದು, 10,000 ಕೋಟಿಗೂ ಅಧಿಕ ಮೌಲ್ಯದ ಸರಕು ಅಪಾಯದಲ್ಲಿದೆ. ಇದರಿಂದ ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂದವನಾಗಿ ಬಂದಿದೆ. ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಗಳು ತಿಳಿಸಿವೆ. ಸುಮಾರು...
ಬೆಂಗಳೂರುರಾಜ್ಯಸುದ್ದಿ

ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್‌ : ಶಾಸಕ ನಾಗೆಂದ್ರರಿಂದ ವಿಮಾನದ ವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಬಳ್ಳಾರಿಯ 35 ಮಂದಿ ಹಾಗೂ ಚಿತ್ರದುರ್ಗ 15 ಮಂದಿ ಸೇರಿ 246 ಕನ್ನಡಿಗರು ಮಾ.4 ರಂದು ಶಾರ್ಜಾ ದಿಂದ ಕೊಚ್ಚಿನ್‍ಗೆ ಬಂದಿಳಿದಿದ್ದರು. 50 ಮಂದಿಗೆ ಅಲ್ಲಿಂದ ಬೆಂಗಳೂರಿಗೆ ಶಾಸಕ ಬಿ ನಾಗೇಂದ್ರ ಅವರು ವಿಮಾನದ ವ್ಯವಸ್ಥೆ ಮಾಡಿದ್ದರು. ಇಂದು ಬೆಳಗ್ಗೆ (ಮಾ.5) ಅವರೆಲ್ಲ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇದನ್ನೂ ಓದಿ: ದುಬೈನಿಂದ...
ದೆಹಲಿರಾಜ್ಯಸುದ್ದಿ

ಯುದ್ಧದ ಎಫೆಕ್ಟ್‌ : ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು -ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನ ರದ್ದುಗೊಳಿಸಿರುವುದಾಗಿ ಹೇಳಿದೆ. ಪ್ರಕಟಣೆಯಲ್ಲಿ ಏನಿದೆ? ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ...
ದೆಹಲಿರಾಜ್ಯಸುದ್ದಿ

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್...
ಬೆಂಗಳೂರುರಾಜ್ಯಸುದ್ದಿ

ಮಾ.3ಕ್ಕೆ ರಕ್ತಚಂದ್ರಗ್ರಹಣ : ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ – ಕಹಳೆ ನ್ಯೂಸ್

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ. ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಜಿಲ್ಲೆರಾಜ್ಯಸುದ್ದಿ

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ -ಕಹಳೆ ನ್ಯೂಸ್

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ....
1 2 3 270
Page 1 of 270