ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ : ತಾಯಿ, ಮಗ ಸಾವು-ಕಹಳೆ ನ್ಯೂಸ್
ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ...







