ಪ್ರಯಾಣಿಕರ ಜೇಬಿಗೆ ಶೇ.15ರಷ್ಟು ಕತ್ತರಿ ಪ್ರಯೋಗ : ಮಧ್ಯರಾತ್ರಿಯಿಂದಲೇ KSRTC ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ – ಕಹಳೆ ನ್ಯೂಸ್
ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ರಾಜ್ಯದ ನಾಲ್ಕು ನಿಗಮಗಳಲ್ಲಿ ಏರಿಕೆಯಾಗಿದ್ದ ಬಸ್ ದರ ಪ್ರಯಾಣ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಶನಿವಾರ ಮಧ್ಯರಾತ್ರಿ 11 ಗಂಟೆಯಿಂದ ನೂತನ ದರ ಪರಿಷ್ಕರಣೆಯಾಗಿದ್ದು, ಭಾನುವಾರದಿಂದ ಹೊಸ ದರ ಜಾರಿಗೆ ಬರಲಿದೆ. ಕೆಎಸ್‌ಆರ್‌ಟಿಸಿ ಕಲ್ಯಾಣ ಕರ್ನಾಟಕ, ವಾಯುವ್ಯ ಮತ್ತು ಬಿಎಂಟಿಸಿಗಳಲ್ಲಿ ಭಾನುವಾರದಿಂದಲೇ ಹೊಸ ದರ ಅನ್ವಯವಾಗಲಿದ್ದು, ಪ್ರಯಾಣಿಕರ ಜೇಬಿಗೆ ಶೇ.15ರಷ್ಟು ಕತ್ತರಿ ಪ್ರಯೋಗವಾಗಲಿದೆ. ಹಾಲಿ ಇದ್ದ ದರಕ್ಕೆ 15% ಏರಿಕೆಯಾಗಲಿದ್ದು, ಶಕ್ತಿ ಯೋಜನೆಯಿಂದ ನಷ್ಟದಲ್ಲಿರುವ ಸಾರಿಗೆ ನಿಗಮಗಳನ್ನು ಲಾಭಕ್ಕಿಂತ...







