ಟೋಲ್ಗೇಟ್ಗಳಲ್ಲಿ ಪತ್ರಕರ್ತರ ವಾಹನಗಳಿಗೆ ಉಚಿತ ಪ್ರವೇಶ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿ ಹಾಗೂ ಬೈಂದೂರು ಶಿರೂರು ಟೋಲ್ಗೇಟ್ನಲ್ಲಿ ಮಾಧ್ಯಮದವರ ವಾಹನಗಳಿಗೆ ಉಚಿತ ಪ್ರವೇಶ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಇಂದು ಕೇಂದ್ರ ಸಚಿವೆ ಹಾಗೂ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮಣಿಪಾಲ ರಜತಾದ್ರಿ ಯಲ್ಲಿರುವ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರಿದ್ದು, ಇವರಿಗೆ ರಾಜ್ಯ...







