ದೆಹಲಿಗೆ ಸಚಿವರ ದಂಡು : ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ -ಕಹಳೆ ನ್ಯೂಸ್
ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಮುಖ ಸಚಿವರು, ನಾಯಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರಿಗೆ ಗೊಂದಲ ಇತ್ಯರ್ಥಪಡಿಸಲು ಒತ್ತಡ ಹೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಏಳೆಂಟು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ...






