ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ ; ಮಂಗಳೂರಿನ ಲೇಡಿಹಿಲ್ನ ಮನೆಯಲ್ಲಿ ಸಾರಾ ಅಬೂಬಕ್ಕರ್ ಅವರ ಅಂತಿಮ ದರ್ಶನ – ಇಂದೇ ಅಂತ್ಯಕ್ರಿಯೆ – ಕಹಳೆ ನ್ಯೂಸ್
ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಲೇಡಿಹಿಲ್ನ ಮನೆಯಲ್ಲಿ ಸಾರಾ ಅಬೂಬಕ್ಕರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ರಾತ್ರಿ 8 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಪಿ. ಅಹಮದ್ ಮತ್ತು ಚೈನಾಬಿ ದಂಪತಿಯ ಪುತ್ರಿಯಾಗಿ ಸಾರಾ ಜನಿಸಿದರು. ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು ಕಾಸರಗೋಡಿನಲ್ಲಿ ಪ್ರೌಢಶಿಕ್ಷಣ...






