ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್ನಿಂದ ಹೊಡೆದು ತಂದೆಯನ್ನೇ ಕೊಂದ ಮಗ – ಕಹಳೆ ನ್ಯೂಸ್
ಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ (Father) ರಾಡ್ನಿಂದ ಹೊಡೆದು ಮಗ (Son) ಕೊಂದಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ...







