ಓಮಿಕ್ರಾನ್ ಪೀಡಿತ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆ – ಕಹಳೆ ನ್ಯೂಸ್
ಬೆಂಗಳೂರು: ಓಮಿಕ್ರಾನ್ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್ಟಿ-ಪಿಸಿಆರ್ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್ಪೋರ್ಟ್ನಲ್ಲಿ ನೀಡಿದ್ದ...







